ಮುಜಾರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ

July 27, 2020

ಮಂಗಳೂರು ಜು.27 : ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
‘ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು.

error: Content is protected !!