ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ‘ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ’ ಕಿರುಹೊತ್ತಿಗೆ ಬಿಡುಗಡೆ

July 27, 2020

ಮಡಿಕೇರಿ ಜು. 27 : ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ “ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ” ಸರ್ಕಾರದ ಸಾಧನೆಯ ಕಿರುಹೊತ್ತಿಗೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೇರಿದಂತೆ ಮತ್ತಿತರರು ಹಾಜರಿದ್ದರು.