ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ’ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ’ ಕಾರ್ಯಕ್ರಮಕ್ಕೆ ಚಾಲನೆ

27/07/2020

ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಇವತ್ತಿಗೆ ಒಂದು ವರ್ಷ. ಹಲವಾರು ಏಳುಬೀಳು, ಒತ್ತಡಗಳನ್ನು ನಿಭಾಯಿಸಿ ಎರಡನೇ ವರ್ಷಕ್ಕೆ ಹೆಜ್ಜೆಯಿಡುತ್ತಿರುವ ಬಿಎಸ್‌ವೈ ವಿಧಾನಸೌಧದಲ್ಲಿ ವರ್ಷದ ಸಾಧನೆಯನ್ನು ‘ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ’ ಹೆಸರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಸಮಾರಂಭದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಸಮಾರಂಭದಲ್ಲಿ ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ಸರ್ಕಾರದ ಸಾಧನೆಯ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದ್ದಾರೆ.