ಸೂರ್ಲಬಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

27/07/2020

ಮಡಿಕೇರಿ ಜು.27 : ಸೋಮವಾರಪೇಟೆ ತಾಲ್ಲೂಕಿನ ಸಾಮಾಜಿಕ ಅರಣ್ಯ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೂರ್ಲಬಿ ಗ್ರಾಮ ಶಾಲೆ ಮತ್ತು ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ವಿವಿಧ ಜಾತಿಯ ಸುಮಾರು 100 ಕ್ಕೂ ಹೆಚ್ಚು ಗಿಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ನೆಟ್ಟರು. ಮಾದಾಪುರ ಉಪ ಪೊಲೀಸ್ ಠಾಣೆ ಠಾಣಾಧಿಕಾರಿ ಪೊನ್ನಪ್ಪ ಅವರು ಪರಿಸರ ಜಾಗೃತಿ ಕುರಿತು ಮಾತನಾಡಿದರು.