ನಾಟಿ ಕಾರ್ಯಕ್ಕೆ ಗದ್ದೆಗಿಳಿದ ವಿದ್ಯಾರ್ಥಿಗಳು

July 27, 2020

ಮಡಿಕೇರಿ ಜು.27 : ಕೊರೋನಾ ಸೋಂಕಿನ ಆತಂಕದಿಂದ ಶಾಲೆಗಳು ಆರಂಭಗೊಳ್ಳದೆ ನಗರ ಪ್ರದೇಶದ ವಿದ್ಯಾರ್ಥಿಗಳು ಮನೆಗಳಲ್ಲೇ ಆನ್ ಲೈನ್ ತರಗತಿಗಳಲ್ಲಿ ತೊಡಗಿಸಿಕೊಂಡಿದ್ದರೆ ಕೊಡಗಿನ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕೃಷಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಚಳಿ, ಮಳೆ, ಕೆಸರಿಗೆ ಅಂಜದೆ ಕೆಸರು ಗದ್ದೆಯಲ್ಲಿ ನಾಟಿ ಕಾರ್ಯದಲ್ಲಿ ತೊಡಗಿರುವ ಮಕ್ಕಳು ಕೃಷಿ ಚಟುವಟಿಕೆ ಬಗ್ಗೆ ಆಸಕ್ತಿ ತೋರುತ್ತಿರುವುದು ವಿಶೇಷ. ಈ ಬಗ್ಗೆ ಗ್ರಾಮಸ್ಥರು ಕೂಡ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

error: Content is protected !!