ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದ

27/07/2020

ಮಡಿಕೇರಿ ಜು.27 : ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ ಆಡಳಿತ ‘ಒಂದು ವರ್ಷ, ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ’ ಎಂಬ ವಿನೂತನ ಕಾರ್ಯಕ್ರಮವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಿತು. ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಫಲಾನುಭವಿಗಳು ನೇರ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಈ ಸುಸಂದರ್ಭದಲ್ಲಿ “ಆಡಳಿತ 1 ವರ್ಷ: ಸವಾಲುಗಳ ವರ್ಷ-ಪರಿಹಾರದ ಸ್ಪರ್ಶ” ಕಿರುಹೊತ್ತಿಗೆ, ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ವಿಶೇಷ ಸಂಚಿಕೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಕೃಷಿ ಸಮ್ಮಾನ್ ಯೋಜನೆ ಪ್ರಮುಖವಾಗಿದೆ. ರಾಜ್ಯದ ಜನರು ನೆಮ್ಮದಿಯಿಂದ ಬದುಕಬೇಕು. ಇನ್ನೂ 3 ವರ್ಷದಲ್ಲಿ ಎಲ್ಲಾ ಬಡವರಿಗೂ ಮನೆ ನಿರ್ಮಿಸಲಾಗುವುದು. ರಾಜ್ಯದ ಎಲ್ಲಾ ಬಡವರಿಗೂ ಹೊಸ ಕೈಗಾರಿಕಾ ನೀತಿ, ಕೈಗಾರಿಕೆ ಉತ್ತೇಜನ ನೀಡುವುದರಿಂದ ಉದ್ಯೋಗ ಸೃಷ್ಟಿಸಬಹುದು. ಅದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಕೋವಿಡ್ ಜೊತೆ ಬದುಕಬೇಕಿದೆ. ಹಾಗೆಯೇ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕಿದೆ. ರಾಜ್ಯವನ್ನು ಮಾದರಿಯಾಗಿ ಮಾಡಲು ಎಲ್ಲರೂ ಕೈಜೋಡಿಸಲು ಶ್ರಮಿಸಬೇಕಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.