ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 354 : 249 ಮಂದಿ ಗುಣಮುಖ

27/07/2020

ಮಡಿಕೇರಿ ಜು.27 : ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದ ವೇಳೆಗೆ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಅಬ್ಬೂರು ಕಟ್ಟೆಯ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 20 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ವಿರಾಜಪೇಟೆಯ ಆರೋಗ್ಯ ವಸತಿ ಗೃಹ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 41 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಸೋಮವಾರಪೇಟೆಯ ಬ್ಯಾಡಗೊಟ್ಟ ಮಾದಲಾಪುರ ಪೋಸ್ಟ್‍ನ 31 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆಯ ಬೀಟಿಕಟ್ಟೆ ಗೌಡಳ್ಳಿಯ 38 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾಪೇಟೆಯ ಶನಿವಾರಸಂತೆ ಕಾವೇರಿ ಕಾಲೇಜು ರಸ್ತೆಯ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 12 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಕುಶಾಲನಗರ ಹುಲುಸೆಯ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕವಾದ 75 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಬ್ಯಾಡಗೊಟ್ಟ ಮಾದಲಾಪುರ ಅಂಚೆ ಮತ್ತು ಬೀಟಿಕಟ್ಟೆ ಗೌಡಳ್ಳಿ, ಸೋಮವಾರಪೇಟೆ ಕಂಟೈನ್‍ಮೆಂಟ್ ವಲಯಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.
ಜಿಲ್ಲೆಯಲ್ಲಿ 3 ಕಂಟೈನ್‍ಮೆಂಟ್ ವಲಯಗಳನ್ನು ಹೊಸದಾಗಿ ತೆರೆಯಲಾಗಿದೆ. ಅರುವತ್ತೋಕ್ಲು ಮೈಸೂರಮ್ಮ ಬಡಾವಣೆ ವಿರಾಜಪೇಟೆ, ಚೆಟ್ಟಳ್ಳಿ ಕಂಡಕೆರೆ ಮತ್ತು ಮೂರ್ನಾಡು ಹೆಲ್ತ್ ಕ್ವಾರ್ಟಸ್‍ನಲ್ಲಿ ಹೊಸ ಕಂಟೈನ್‍ಮೆಂಟ್ ವಯಗಳನ್ನು ತೆರೆಯಲಾಗಿದೆ.
ಈ ಸಂಬಂಧ ಜಿಲ್ಲೆಯಲ್ಲಿ ಒಟ್ಟು 354 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 249 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 99 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 06 ಮಂದಿ ಕೋವಿಡ್-19 ನಿಂದ ಮೃತರಾಗಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಒಟ್ಟು 99 ಕಂಟೈನ್‍ಮೆಂಟ್ ವಲಯಗಳಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.