ಜಿಲ್ಲೆಯಲ್ಲಿ 2 ಪಾಸಿಟಿವ್ ಪ್ರಕರಣ ಪತ್ತೆ

28/07/2020

ಮಡಿಕೇರಿ ಜು.28 : ಜಿಲ್ಲೆಯಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಕುಶಾಲನಗರದ ಹುಲಸೆ ಗ್ರಾಮದ 30 ವರ್ಷದ ಮಹಿಳೆ ಹಾಗೂ ಮಡಿಕೇರಿ ದೇಚೂರಿನ 45 ವರ್ಷದ ಪುರುಷನಿಗೆ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದರು.
ಈ ಸಂಬಂಧ ಜಿಲ್ಲೆಯಲ್ಲಿ ಒಟ್ಟು 356 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 266 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 84 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 6 ಮಂದಿ ಕೋವಿಡ್-19 ನಿಂದ ಮೃತರಾಗಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಒಟ್ಟು 80 ಕಂಟೈನ್‍ಮೆಂಟ್ ವಲಯಗಳಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.