4 ಯೋಜನೆಗಳ ಮಾರ್ಗಸೂಚಿ ಬಿಡುಗಡೆ

28/07/2020

ನವದೆಹಲಿ ಜು.28 : ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ದೇಶದಲ್ಲಿ ಬೃಹತ್ ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳ ಅಭಿವೃದ್ಧಿಗೆ ಸಂಬಂಧಿಸಿದ ನಾಲ್ಕು ಯೋಜನೆಗಳ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
“ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ, ಆತ್ಮಾ ನಿರ್ಭರ್ ಭಾರತಕ್ಕಾಗಿ ಫಾರ್ಮಾ ಕ್ಷೇತ್ರದಲ್ಲೂ ಯೋಜನೆಗಳನ್ನು ರೂಪಿಸಲಾಗಿದೆ” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ತಿಳಿಸಿದ್ದಾರೆ.
53 ನಿರ್ಣಾಯಕ ಸಕ್ರಿಯ ಔಷಧೀಯ ಪದಾರ್ಥಗಳು(ಎಪಿಐಗಳು) ಅಥವಾ ಕೀ ಸ್ಟಾರ್ಟ್ ಮೆಟೀರಿಯಲ್ಸ್ (ಕೆಎಸ್‍ಎಂ) ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ. ವೈದ್ಯಕೀಯ ಸಾಧನಗಳ ಉತ್ಪಾದನೆಯಲ್ಲಿ ಭಾರತವು ಆಮದುಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇದನ್ನು ಕಡಿಮೆ ಮಾಡುವುದು ಇದರ ಉದ್ದೇಶ ಎಂದು ಸದಾನಂದ ಗೌಡ ಅವರು ಹೇಳಿದ್ದಾರೆ.