ಸೂತಕದಲ್ಲಿ ಸರ್ಕಾರದ ಸಂಭ್ರಮ

28/07/2020

ಬೆಂಗಳೂರು ಜು.28 : ಕೊರೋನಾ ಸೂತಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಒಂದು ವರ್ಷದ ಸಾಧನೆಯನ್ನು ತನ್ನದೇ ಆದ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಕವನ ವಾಚಿಸಿ ಲೇವಡಿ ಮಾಡಿದರು. “ಒಂದು ವರ್ಷದ ಬಿ.ಎಸ್. ಯಡಿಯೂರಪ್ಪ ನ ಆಟವೇ ಆಟ. ಒಂದನೇತಿಂಗಳು ಮಂತ್ರಿಮಂಡಲ ಇಲ್ಲದೆ ತಿರುಗಾಟ. ಎರಡನೇತಿಂಗಳು ನೆರೆ ಪರಿಹಾರ ಕೊಡದೆ ನರಳಾಟ. ಮೂರನೇ ತಿಂಗಳು ಉಪಚುನಾವಣೆ ಎಂಬ ಬಯಲಾಟ. ನಾಲ್ಕನೇ ತಿಂಗಳುಮಂತ್ರಿ ಮಂಡಲ ಎಂಬ ದೊಂಬರಾಟ. ಐದುಆರರಲ್ಲಿ ಮಂತ್ರಿಗಿರಿಗಾಗಿ ಕಿತ್ತಾಟ. ಏಳುಎಂಟರ ತಿಂಗಳಲ್ಲಿ ಕೋರೋಣ ಲಾಕ್ ಡೌನ್ ಎಂಬ ಹೊರಳಾಟ. ಒಂಬತ್ತು_ಹತ್ತು ಕೊರೋನ ಕೋರೋನ ಎಂಬ ಕಿರುಚಾಟ. ಹನ್ನೊಂದು ಹನ್ನೆರಡನೇ ತಿಂಗಳು ಜನ ಸಾಮಾನ್ಯರಿಗೆ ಮಾತ್ರ ಸಾವು ಬದುಕಿನ ಆಟ”. ಎಂದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ತಿಂಗಳಿಂದ ವಿಧವಾ ವೇತನ, ವೃದ್ಧಾಪ್ಯ ವೇತನ, ನೀಡಿಲ್ಲ. ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಸರ್ಕಾರ ಅಗಾಧ ಸಾಧನೆ ಮಾಡಿದೆ ಎಂದು ಹೇಳುತ್ತಿದೆ. ಹಿಂದಿನ ಸರ್ಕಾರದ ಯೋಜನೆಗಳನ್ನು ರದ್ದು ಮಾಡಿರುವುದೇ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯಾಗಿದೆ ಎಂದರು.