ಕೊಡಗಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 78 ಕೋಟಿ ರೂ.

28/07/2020

ಮಡಿಕೇರಿ ಜು.28 : ಪ್ರವಾಸೋದ್ಯಮದ ಅಭಿವೃದ್ಧಿಗೆ ರಸ್ತೆಗಳ ಅಭಿವೃದ್ಧಿ ಅತಿ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಒಟ್ಟು 78 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಲಿವೆ ಎಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ ಹೇಳಿದ್ದಾರೆ.
ಮಡಿಕೇರಿ-ಸಂಪಾಜೆ ರಸ್ತೆಯಲ್ಲಿ ಭೂ ಕುಸಿತದಿಂದ ಹಾನಿಗೊಳಗಾದ ಸ್ಥಳಗಳಲ್ಲಿ 59 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.