ಬಿಜೆಪಿ ಯುವಮೋರ್ಚಾದಿಂದ ಕುಶಾಲನಗರದಲ್ಲಿ ಗಿಡ ನೆಡುವ ಕಾರ್ಯಕ್ರಮ

July 28, 2020

ಮಡಿಕೇರಿ ಜು. 28 : ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಬಿಜೆಪಿ ಯುವಮೋರ್ಚಾ ಆಶ್ರಯದಲ್ಲಿ ಕುಶಾಲನಗರದಲ್ಲಿ ಸಸಿಗಳನ್ನು ನೆಡಲಾಯಿತು.
ಸೋಮವಾರಪೇಟೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೃಷ್ಣಪ್ಪ ನೇತೃತ್ವದಲ್ಲಿ ಕುಶಾಲನಗರದ ಗೌಡ ಸಮಾಜ ಬಳಿ ಬಡಾವಣೆಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ವೈಶಾಖ್, ಕುಶಾಲನಗರ ಬಿಜೆಪಿ ಯುವ ಮೋರ್ಚಾ ಘಟಕದ ಅಧ್ಯಕ್ಷ ಚಂದ್ರು,
ಪ್ರಮುಖರಾದ ನವನೀತ್, ಚಂದ್ರಶೇಖರ್, ಗಿರೀಶ್, ಸುನಿಲ್, ಡಿ.ಸಿ.ಮಂಜುನಾಥ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಚೆಲುವರಾಜ್ ಮತ್ತಿತರರು ಇದ್ದರು.

error: Content is protected !!