ದಲಿತ ಸಂಘರ್ಷ ಸಮಿತಿಯಿಂದ ಕುಶಾಲನಗರದಲ್ಲಿ ಸಾಹು ಮಹಾರಾಜರ 146ನೇ ಜಯಂತೋತ್ಸವ ಆಚರಣೆ

28/07/2020

ಮಡಿಕೇರಿ ಜು. 28 : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕುಶಾಲನಗರದ ಟೌನ್ ಕಾಲೋನಿಯ ಅಂಬೇಡ್ಕರ್ ಭವನದಲ್ಲಿ ಸಾಹು ಮಹಾರಾಜರ 146ನೇ ಜಯಂತೋತ್ಸವ ಆಚರಿಸಲಾಯಿತು.
ಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಬಿ. ರಾಜು, ಸಾಹು ಮಹಾರಾಜ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಚ್.ಬಿ. ನಿಂಗರಾಜು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಉಪಾಧ್ಯಕ್ಷ ಎಸ್.ಕೆ. ಸ್ವಾಮಿ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಂಗಮೇಶ್, ಪ್ರಮುಖರಾದ ಸಾವಿತ್ರಮ್ಮ, ಕೆ.ಆರ್. ಕೀರ್ತಿರಾಜ್, ಮಹದೇವ್, ಪತ್ರಕರ್ತ ಕೆ.ಟಿ.ಶ್ರೀನಿವಾಸ್, ನಿವೃತ್ತ ಶಿಕ್ಷಕ ದೇವಯ್ಯ ಮತ್ತಿತರರು ಇದ್ದರು.