ಕಾಂಗ್ರೆಸ್ ತೀವ್ರ ಆಕ್ಷೇಪ

29/07/2020

ಬೆಂಗಳೂರು ಜು.29 : ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಶಾಲಾ ದಿನಗಳು ಕಡಿತಗೊಂಡಿರುವುದರಿಂದ ಶಿಕ್ಷಣ ಇಲಾಖೆ ಒಂದಿಷ್ಟು ಪಠ್ಯಗಳನ್ನು ಕೈಬಿಡಲು ನಿರ್ಧರಿಸಿದೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡಿರುವ ಟಿಪ್ಪು ಸುಲ್ತಾನ್ ನನ್ನು ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದ ಬಿಜೆಪಿ ಸರ್ಕಾರ, ತನ್ನ ಕಾರ್ಯಸೂಚಿ ಸಾಧಿಸಲು ಟಿಪ್ಪು ಪಠ್ಯವನ್ನು ಕೈಬಿಟ್ಟಿದ್ದು, ಪಠ್ಯಪುಸ್ತಕವನ್ನೂ ಕೇಸರೀಕರಣ ಮಾಡಲು ಬಿಜೆಪಿ ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಕರ್ನಾಟಕ ರಾಜ್ಯ ಮಾತ್ರವಲ್ಲ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿಯೂ ಬಿಜೆಪಿ ಈ ರೀತಿ ಮಾಡಿದೆ. ಪಠ್ಯ ಪುಸ್ತಕ ಕೇಸರೀಕರಣ ಮಾಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ, ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.