ಭರದಿಂದ ಸಾಗಿದೆ ಪ್ರತಿಮೆಗಳ ನಿರ್ಮಾಣ

29/07/2020

ಮಂಡ್ಯ ಜು.29 : ವಿವಾದದ ನಡುವೆಯೇ ಕನ್ನಂಬಾಡಿ ಅಣೆಕಟ್ಟೆಯ ಬಳಿ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ಅದರಲ್ಲೂ ಪ್ರಗತಿಪರರು ಮತ್ತು ಹೋರಾಟಗಾರರ ತೀವ್ರ ಹೋರಾಟದ ನಡುವೆಯೂ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ಸಹ ಬರದಿಂದ ಸಾಗಿರುವುದು ಅಸಮಾಧಾನಕ್ಕೆ ತುಪ್ಪ ಸುರಿದಂತಾಗಿದೆ. ರಾಜ್ಯ ಸರ್ಕಾರ ಕೆಆರ್ ಎಸ್ ಅಣೆಕಟ್ಟೆಯ ಮುಖ್ಯ ದ್ವಾರದಲ್ಲಿ ನಾಲ್ವಡಿ ಕೃಷ್ಣ ರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಅವರ ಪ್ರತಿಮೆಗಳನ್ನ ನಿರ್ಮಾಣ ಮಾಡಲು ಈಗಾಗಲೇ ಮೈಸೂರು ಮೂಲದ ಹೆಚ್‍ಎಸ್‍ಆರ್ ಕಂಪನಿಗೆ 9 ಕೋಟಿ ರೂಪಾಯಿಗೆ ಟೆಂಡರ್ ಕೂಡ ನೀಡಿದೆ. ಟೆಂಡರ್ ಪಡೆದಿರುವ ಕಂಪನಿ ಎರಡೂ ಪ್ರತಿಮೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡಿದೆ.