ಕೊಡಗು ಜಿಲ್ಲೆಯ ಮಳೆ ವಿವರ

July 29, 2020

ಮಡಿಕೇರಿ ಜು.29 : ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.17 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.25 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.27 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಆಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 6.40, ಸಂಪಾಜೆ 1.40, ಭಾಗಮಂಡಲ 1.20, ಶ್ರೀಮಂಗಲ 7.60 ಮಿ.ಮೀ.ಮಳೆಯಾಗಿದೆ.