ಜಿಲ್ಲೆಯಲ್ಲಿ ಹೊಸದಾಗಿ 6 ಕೊವೀಡ್ ಪ್ರಕರಣ ಪತ್ತೆ

29/07/2020

ಮಡಿಕೇರಿ ಜು. 29 : ಜಿಲ್ಲೆಯಲ್ಲಿ ಮಧ್ಯಾಹ್ನ ವೇಳೆಗೆ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ವೀರಾಜಪೇಟೆಯ ಚೆಂಬೆ ಬೆಳ್ಳೂರು ಪೋಸ್ಟ್‌ನ ಕುಕ್ಕಲೂರು ಗ್ರಾಮದ 43 ವರ್ಷದ ಮಹಿಳೆ ಹಾಗೂ 15 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ವೀರಾಜಪೇಟೆಯ ಕಾಕೋಟುಪರಂಬುವಿನ 64 ವರ್ಷದ ಮಹಿಳೆಗೆ ಹಾಗೂ ಗೋಣಿಕೊಪ್ಪದ ಚಿನ್ನಂಗೋಳಿಯ 34 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ವೀರಾಜಪೇಟೆಯ ಕಾಕೋಟು ಪೆರಂಬುವಿನ ಬೇತ್ರಿಯ 35 ವರ್ಷದ ಮಹಿಳೆ ಮತ್ತು ರ್ಯಾಪಿಡ್ ಆಂಟಿಜನ್ ಕಿಟ್ ಮುಖಾಂತರ ಸೋಮವಾರಪೇಟೆ ತಾಲೂಕಿನ ಚಿಕ್ಕಾಲೆವರದ 48 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 374 ಆಗಿದ್ದು, 272 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 96 ಸಕ್ರಿಯ ಪ್ರಕರಣಗಳಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 84 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.