ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 385ಕ್ಕೆ ಏರಿಕೆ

30/07/2020

ಮಡಿಕೇರಿ ಜು. 30 : ಜಿಲ್ಲೆಯಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆ ಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆಯ ಹುಲುಸೆಯ 45 ವರ್ಷದ ಮಹಿಳೆ, 52 ವರ್ಷದ ಪುರುಷ, 33 ವರ್ಷದ ಪುರುಷ, 23 ವರ್ಷದ ಮಹಿಳೆ, 2 ವರ್ಷದ ಬಾಲಕಿ, 27 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಮಡಿಕೇರಿಯ ನಾಪೆÇೀಕ್ಲುವಿನ ಎಮ್ಮೆಮಾಡುವಿನಲ್ಲಿ 52 ವರ್ಷದ ಪುರುಷ. ವಿರಾಜಪೇಟೆಯ ಸಿದ್ಧಾಪುರದ 64 ವರ್ಷದ ಮಹಿಳೆ.
ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿಯ 33 ವರ್ಷದ ಪುರುಷ ಮತ್ತು ರ್ಯಾಪಿಡ್ ಆಂಟಿಜನ್ ಕಿಟ್ ಮುಖಾಂತರ ಪರೀಕ್ಷಿಸಲಾಗಿ ಮಡಿಕೇರಿ ಮಹದೇವಪೇಟೆಯ ಎ.ಬಿ ಸ್ಕೂಲ್ ಬಳಿಯ 54 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳು 385 ಆಗಿದ್ದು, 272 ಜನ ಗುಣಮುಖರಾಗಿದ್ದಾರೆ. 105 ಸಕ್ರಿಯ ಪ್ರಕರಣಗಳಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 88 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.