ಆರೋಗ್ಯ ಸುರಕ್ಷತಾ ಕ್ರಮದೊಂದಿಗೆ ಮಡಿಕೇರಿಯಲ್ಲಿ ಸಿಇಟಿ ಪರೀಕ್ಷೆ

30/07/2020

ಮಡಿಕೇರಿ ಜು.30 : ಕೊರೋನಾ ಆತಂಕದ ನಡುವೆಯೂ ಕೊಡಗಿನಲ್ಲಿ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ 1200 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಗ್ಗೆ ಒಂಭತ್ತು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರಗಳಿಗೆ ಹಾಜರಾದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯ ಸುರಕ್ಷತಾ ವಿಧಾನಗಳನ್ನು ಅನುಸರಿಸಿದರು. ಆರೋಗ್ಯ ಸಿಬ್ಬಂದಿಗಳು ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ ಮಾಡಿದರು. ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.