ಬಿಜೆಪಿ ಸರ್ಕಾರಕ್ಕೆ ಹೆಚ್‍ಡಿಕೆ ಬೆಂಬಲ !

31/07/2020

ಬೆಂಗಳೂರು ಜು.31 : ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ವಿಧಾನ ಸೌಧದಲ್ಲಿಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ಅಧಿಕಾರಿಗಳನ್ನೇ ಜಿಲ್ಲೆಗೆ ವರ್ಗಾವಣೆ ಮಾಡಿಕೊಟ್ಟಿದ್ದಾರೆ. ಅವರು ಸೂಚಿಸಿದ ಯೋಜನೆಗಳು, ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಹಾಗೂ ಮುಖ್ಯಮಂತ್ರಿಗಳ ವಿರುದ್ಧವೂ ಯೋಗೀಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.