ತಮಿಳುನಾಡಿನಲ್ಲಿ ಲಾಕ್‍ಡೌನ್ ವಿಸ್ತರಣೆ

31/07/2020

ಚೆನ್ನೈ ಜು.31 : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಆ.31ರವರೆಗೆ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೆ ಲಾಕ್‍ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‍ಡೌನ್‍ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ ಎಂದು ಅವರು ತಿಳಿಸಿದ್ದಾರೆ.