ಆ.1 ರಂದು ನೆಲ್ಯಹುದಿಕೇರಿ ಗ್ರಾಮಸ್ಥರು ಎಚ್ಚರಿಕೆಯಿಂದಿರಿ

31/07/2020

ಮಡಿಕೇರಿ ಜು.31 : ಕೊನೆಗೂ ಗ್ರಾಮಸ್ಥರ ಒತ್ತಡಕ್ಕೆ ಮಣಿದಿರುವ ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಗೆ ಮುಹೂರ್ತ ನಿಗಧಿ ಮಾಡಿದೆ. ಆ.1 ಮತ್ತು 2 ರಂದು ನೆಲ್ಯಹುದಿಕೇರಿ, ಅಭ್ಯತ್ ಮಂಗಲ, ಬೆಟ್ಟದಕಾಡು, ಬರಡಿ, ವಾಲ್ನೂರು ತ್ಯಾಗತ್ತೂರು ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಭಾಗದಲ್ಲಿ ಸುಮಾರು 30 ಕ್ಕೂ ಹೆಚ್ಚು ಜಾಡಾನೆಗಳಿವೆ. ಕಾರ್ಯಾಚರಣೆ ಸಂದರ್ಭ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ.