ಎರಡನೇ ದಿನವೂ ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

31/07/2020

ಮಡಿಕೇರಿ ಜು.31 : ಎರಡನೇ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಭೌತಶಾಸ್ತ್ರ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಸುಗಮವಾಗಿ ನಡೆಯಿತು.
ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 458 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜಿನಲ್ಲಿ 286 ವಿದ್ಯಾರ್ಥಿಗಳು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 149, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 188, ಒಟ್ಟು 1081 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 81 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶಿವಲಿಂಗ ಶೆಟ್ಟಿ ಅವರು ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ.