ಸಿದ್ದು, ಡಿಕೆಶಿಗೆ ಲೀಗಲ್ ನೋಟಿಸ್

01/08/2020

ಬೆಂಗಳೂರು ಜು.31 : ಕೋವಿಡ್ 19 ನಿಯಂತ್ರಣಕ್ಕಾಗಿ ಖರೀದಿಸಲಾಗಿರುವ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಾರ್ವಜನಿಕ ತಿಳಿವಳಿಕೆ ಪತ್ರವನ್ನು (ಲೀಗಲ್ ನೋಟೀಸ್)ನೀಡಿದ್ದು 15 ದಿನದಲ್ಲಿ ಉತ್ತರ ನೀಡಬೇಕು ಹಾಗೂ ಬಹಿರಂಗವಾಗಿ ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಒಂದು ವರ್ಷ ಪೂರೈಸಿ ಜನ ಮೆಚ್ಚುಗೆಗೆ ಪಾತ್ರವಾಗಿದೆ
ಆದರೆ, ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಟ್ಟೆ ಉರಿ ಶುರು ವಾಗಿದ್ದು, ಹೊಟ್ಟೆ ಉರಿ ಸಹಿಸದೇ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿ ಆರೋಪ ಪ್ರತ್ಯಾರೋಪ ಮಾಡಿ ಬಿಜೆಪಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಕೋವಿಡ್ ಉಪಕರಣ ಖರೀದಿ ಮಾಹಿತಿ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಆರೋಗ್ಯ ಇಲಾಖೆ ಅಪರ ಮುಖ್ಯ ಪ್ರಧಾನ ಕಾರ್ಯ ದರ್ಶಿ ಹಾಗೂ ಮುಖ್ಯಮಂತ್ರಿ ಮುಖ್ಯ ಕಾರ್ಯದರ್ಶಿ ಅವರಿಗೆ 20 ಪತ್ರ ಬರೆದರು ಒಂದಕ್ಕೂ ಉತ್ತರ ನೀಡಿಲ್ಲ ಎಂದು ಅವರೇ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.