ನಟ ಸುಶಾಂತ್ ಪ್ರಕರಣಕ್ಕೆ ತಿರುವು

01/08/2020

ನವದೆಹಲಿ ಜು.31 : ಬಾಲಿವಿಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ಕೇಸ್ ದಾಖಲಿಸಿದ್ದಾರೆ.
ನಟಿ ರಿಯಾ ಚಕ್ರವರ್ತಿ ಮತ್ತು ಇತರರು ತನ್ನ ಮಗನ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬಿಹಾರ ಪೊಲೀಸರು ದಾಖಲಿಸಿದ ಎಫ್‍ಐಆರ್ ಆಧಾರದ ಮೇಲೆ ಇಡಿ ಅಧಿಕಾರಿಗಳು ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವು ಮತ್ತು ಅಕ್ರಮ ಹಣ ವಹಿವಾಟಿಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.