ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

01/08/2020

ಮಡಿಕೇರಿ ಆ.1 : ಕೊಡಗು ಜಿಲ್ಲೆಯಲ್ಲಿ ಆ.4 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗಿನಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜುಲೈ ತಿಂಗಳಿನಲ್ಲಿ ಕೈಕೊಟ್ಟಿದ್ದ ಮಳೆ ಆಗಸ್ಟ್ ತಿಂಗಳಿನಲ್ಲಿ ಧಾರಾಕಾರವಾಗಿ ಸುರಿಯುವ ಆತಂಕ ಎದುರಾಗಿದೆ. 2018 ಮತ್ತು 2019 ರಲ್ಲಿ ಆಗಸ್ಟ್ ತಿಂಗಳಿನಲ್ಲೇ ಕೊಡಗಿನಲ್ಲಿ ಮಳೆಹಾನಿ ಅನಾಹುತಗಳು ಸಂಭವಿಸಿತ್ತು.