ವಿರಾಜಪೇಟೆ ತಾಲ್ಲೂಕು ಬಿಜೆಪಿಯಿಂದ ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಕರಪತ್ರ ವಿತರಣೆ

01/08/2020

ಮಡಿಕೇರಿ ಆ. 1 : ವಿರಾಜಪೇಟೆ ತಾಲ್ಲೂಕು ಬಿಜೆಪಿ ವತಿಯಿಂದ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮಳಿಗೆಗಳಿಗೆ ಹಾಗೂ ಮನೆ ಮನೆಗಳಿಗೆ ತೆರಳಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಬಗ್ಗೆ ಕರಪತ್ರಗಳನ್ನು ವಿತರಿಸಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಞ್ಞಂಗಡ ಅರುಣ್ ಭೀಮಯ್ಯ, ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೊರ್ಚದ ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ, ಸಾಮಾಜಿಕ ಜಾಲತಾಣದ ನಿರ್ವಾಹಕ ಚೆಟ್ಟಂಗಡ ಮಹೇಶ್ ಮಂದಣ್ಣ, ಪಂ. ಸದಸ್ಯ ಸರೋಜ ಇದ್ದರು.