ಜಿಲ್ಲೆಯಲ್ಲಿ 15 ಸೋಂಕಿತರು ಪತ್ತೆ

August 3, 2020

ಮಡಿಕೇರಿ ಆ. 3 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 487ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ವಿರಾಜಪೇಟೆಯ ವಡ್ಡರಮಡುವಿನ 38 ವರ್ಷದ ಪುರುಷ, 10 ಮತ್ತು 12 ವರ್ಷದ ಬಾಲಕ, 30 ವರ್ಷದ ಮಹಿಳೆ, 4, 10 ಮತ್ತು 11 ವರ್ಷದ ಬಾಲಕ, 14 ವರ್ಷದ ಬಾಲಕಿ, 45 ವರ್ಷದ ಪುರುಷ, 16 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ.
ವಿರಾಜಪೇಟೆಯ ವಡ್ಡರಮಡುವಿನ ಗ್ರಾಮದ 47 ವರ್ಷದ ಮಹಿಳಾ ಆರೋಗ್ಯ ಕಾರ್ಯಕರ್ತೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಪ್ರಯಾಣದ ಇತಿಹಾಸವಿರುವ ವಿರಾಜಪೇಟೆ ಚಿಕ್ಕಪೇಟೆಯ 29 ವರ್ಷದ ಪುರುಷ.
ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಕಲಾಂ ಲೇಔಟ್ ನ 64 ವರ್ಷದ ಪುರುಷ ದೃಢಪಟ್ಟಿದೆ.
ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮುಖಾಂತರ ಬೆಂಗಳೂರು ಪ್ರಯಾಣದ ಇತಿಹಾಸ ಹೊಂದಿರುವ ಸೋಮವಾರಪೇಟೆಯ ಅಬ್ಬೂರ್ ಕಟ್ಟೆಯ 50 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ಪ್ರಯಾಣದ ಇತಿಹಾಸ ಹೊಂದಿರುವ ವಿರಾಜಪೇಟೆಯ ಚಾರ್ಮುಡಿಯ 57 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 487 ಪ್ರಕರಣಗಳು ದೃಢಪಟ್ಟಿದ್ದು, 322 ಮಂದಿ ಗುಣಮುಖರಾಗಿದ್ದಾರೆ. 157 ಸಕ್ರಿಯ ಪ್ರಕರಣಗಳಿದ್ದು, 09 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 113 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!