ಶಾಲೆಗಳಲ್ಲಿ ಸಿಗಲಿದೆ ಬೆಳಗ್ಗಿನ ಉಪಾಹಾರ

03/08/2020

ನವದೆಹಲಿ ಆ.3 : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗ್ಗಿನ ಉಪಾಹಾರವನ್ನು ಕೂಡ ನೀಡಲಾಗುತ್ತದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಈಗಾಗಲೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಮಕ್ಕಳಿಗೆ ಬೆಳಗಿನ ಹೊತ್ತು ಪೌಷ್ಟಿಕಯುಕ್ತ ಉಪಾಹಾರ ಸೇವನೆಗೆ ಸಿಕ್ಕಿದರೆ ನಂತರ ಇಡೀ ದಿನ ಮಕ್ಕಳು ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು, ಹೆಚ್ಚು ಚಟುವಟಿಕೆಯಿಂದ ಇರಲು ಸಹಕಾರಿಯಾಗುತ್ತದೆ, ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ತಿಂಡಿಯನ್ನು ಕೂಡ ಸೇರಿಸಲು ಚಿಂತನೆ ನಡೆಸಲಾಗಿದೆ.
ಶಾಲಾ ಶಿಕ್ಷಣ ವ್ಯವಸ್ಥೆಯೊಳಗೆ ಆರೋಗ್ಯಯುತ ಆಹಾರ, ಉತ್ತಮ ತರಬೇತಿ ಪಡೆದ ಸಾಮಾಜಿಕ ಕಾರ್ಯಕರ್ತರು, ಮಾನಸಿಕ ಸಲಹೆ ತಜ್ಞರು ಮತ್ತು ಸಮುದಾಯಗಳ ಪಾಲ್ಗೊಳ್ಳುವಿಕೆ ಮುಖ್ಯವಾಗುತ್ತದೆ ಎಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹೇಳುತ್ತದೆ.