ಅಮಿತಾಭ್ ಬಚ್ಚನ್ ಆಸ್ಪತ್ರೆಯಿಂದ ಬಿಡುಗಡೆ

03/08/2020

ಮುಂಬೈ ಆ.3 : ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಖ್ಯಾತನ ಅಮಿತಾಭ್ ಬಚ್ಚನ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ 20 ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತಾಭ್ ಬಚ್ಚನ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರ ಇತ್ತೀಚಿನ ಕೊರೋನಾ ಟೆಸ್ಚ್ ವರದಿ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.