ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ ಆ. 3 : ಕೊಡಗು ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ 10 ಮಿ.ಮೀ ಗಿಂತಲೂ (1 ಸೆಂ.ಮೀ.) ಕಡಿಮೆ ಮಳೆಯಾಗಿದೆ. ಆದರೆ ಆಗಸ್ಟ್, 02 ರಿಂದ ಭಾರಿ ಮಳೆಯಾಗುತ್ತಿದೆ. ಜುಲೈ ತಿಂಗಳ ಕೊನೆ ವಾರದಲ್ಲಿ ವ್ಯಾಪಕ ಮಳೆಯಾಗಬೇಕಿದ್ದ ಅವಧಿಯಲ್ಲಿ ಮಳೆ ಕಡಿಮೆಯಾಗಿದ್ದನ್ನು ಗಮನಿಸಿದಾಗ, ಈ ಬಾರಿ ಅಷ್ಟಾಗಿ ಮಳೆಯಾಗುವುದಿಲ್ಲ ಎಂದು ಭಾವಿಸಲಾಗಿತ್ತು, ಆದರೆ ಭಾನುವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯನ್ನು ನೋಡಿದಾಗ ಈ ಬಾರಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 50.92 ಮಿ.ಮೀ. ಕಳೆದ ವರ್ಷ ಇದೇ ದಿನ 19.11 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 873 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 836.72 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.30 ಮಿ.ಮೀ. ಕಳೆದ ವರ್ಷ ಇದೇ ದಿನ 17.68 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1317.87 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1153.15 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.20 ಮಿ.ಮೀ. ಕಳೆದ ವರ್ಷ ಇದೇ ದಿನ 33.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 764.42 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 850.36 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 5.97 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 536.72 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 506.64 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 54.80, ನಾಪೋಕ್ಲು 43.20, ಸಂಪಾಜೆ 56.20, ಭಾಗಮಂಡಲ 55, ವಿರಾಜಪೇಟೆ ಕಸಬಾ 43.80, ಹುದಿಕೇರಿ 59, ಶ್ರೀಮಂಗಲ 68, ಪೊನ್ನಂಪೇಟೆ 40, ಅಮ್ಮತ್ತಿ 28, ಬಾಳೆಲೆ 38.40, ಸೋಮವಾರಪೇಟೆ ಕಸಬಾ 41, ಶನಿವಾರಸಂತೆ 54, ಶಾಂತಳ್ಳಿ 108, ಕೊಡ್ಲಿಪೇಟೆ 68.80, ಕುಶಾಲನಗರ 18.70, ಸುಂಟಿಕೊಪ್ಪ 35 ಮಿ.ಮೀ.ಮಳೆಯಾಗಿದೆ.
