ಅಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ್ದ ದಿನೇಶ್‍ಗೆ ವಿವಿಧ ಸಂಘಟನೆಗಳಿಂದ ಸನ್ಮಾನ

03/08/2020

ಸೋಮವಾರಪೇಟೆ,ಆ.3: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಸೋಮವಾರಪೇಟೆಯಿಂದ ಭಾಗವಹಿಸಿದ್ದ ಕುಂದಳ್ಳಿ ನಿವಾಸಿ ದಿನೇಶ್ ಅವರನ್ನು ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು.
ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಮೃತ್ಯುಂಜಯ, ಜೈಜವಾನ್ ಮಾಜೀ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಪ್ರಮುಖರಾದ ಕಿಬ್ಬೆಟ್ಟ ಮಧು, ಜೀವನ್, ಜಗನ್ನಾಥ್, ಚೇತನ್, ಪ್ರಕಾಶ್, ಅಭಿಷೇಕ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದು, ಸನ್ಮಾನಿಸಿದರು.