ಗುಣಮುಖ ಪ್ರಮಾಣ ಶೇ.5.67 ರಷ್ಟು ಏರಿಕೆ

04/08/2020

ಬೆಂಗಳೂರು ಆ.4 : ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
“ಪ್ರತಿ ದಿನ ಗುಣಮುಖರಾಗುವವರ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಬೆಂಗಳೂರು ನಗರದಲ್ಲಿ ಈ ಪ್ರಮಾಣ ಶೇ.9.17 ರಷ್ಟು ಏರಿಕೆ ಕಂಡಿದೆ. ಭಾನುವಾರ (ಆ.2) ಸಂಜೆಯ ವೇಳೆಗೆ ರಾಜ್ಯದ ಚೇತರಿಕೆ ಪ್ರಮಾಣ ಶೇ.42.81 ಮತ್ತು ಬೆಂಗಳೂರಿನಲ್ಲಿ ಶೇ.35.14 ರಷ್ಟು ಇತ್ತು”, ಎಂದು ಅವರು ತಿಳಿಸಿದ್ದಾರೆ.