ಕೊಡಗಿನ ವಿವಿಧೆಡೆ 24 ಗಂಟೆಗಳಲ್ಲಿ 100 ಮಿ.ಮೀ ಗೂ ಅಧಿಕ ಮಳೆ

04/08/2020

ಮಡಿಕೇರಿ ಆ. 4 : ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ ಪ್ರಮಾಣ 74 ಮಿ.ಮಿ. ಆಗಿದ್ದು, 104 ಗ್ರಾಮ ಪಂಚಾಯತ್ ಗಳ ಪೈಕಿ 15 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 100 ಮಿ.ಮಿ. ಗಿಂತಲೂ ಅಧಿಕ ಮಳೆಯಾಗಿರುತ್ತದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದ ಪ್ರದೇಶ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿ ಆಗಿದ್ದು 172 ಮಿ.ಮೀ. ಮಳೆಯಾಗಿರುತ್ತದೆ. ಅಂತೆಯೇ ಭಾಗಮಂಡಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 170.5 ಮಿ.ಮಿ. ನಷ್ಟು ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಾಣಿ ಜಾಯ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ದಿನಾಂಕ 07.08.2020ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುತ್ತದೆ. ಹೆಚ್ಚಿನ ಮಳೆಯಾಗುತ್ತಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವಾಗುವ ಹಾಗೂ ತಗ್ಗಿನ ಪ್ರದೇಶಗಳು ಜಲಾವೃತವಾಗುವ ಸಾಧ್ಯತೆಗಳು ಇರುವುದರಿಂದ ಅಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಯಾವುದೇ ವಿಚಾರಗಳಿಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಂ. 1077 ಅಥವಾ ವಾಟ್ಸಪ್ 8550001077 ನ್ನು ಸಂಪರ್ಕಿಸಲು ಕೋರಲಾಗಿದೆ.