ಕೊಡಗು ಜಿಲ್ಲೆಯ ಮಳೆ ವಿವರ

04/08/2020

ಮಡಿಕೇರಿ ಆ. 4 : ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿರುಸಿನ ಮಳೆಯಿಂದಾಗಿ ನಾಡಿನ ಜೀವನದಿ ಕಾವೇರಿ, ಲಕ್ಷ್ಮಣ ತೀರ್ಥ ನದಿಗಳು, ತೊರೆ, ಹಳ್ಳ-ಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ.
ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 106.12 ಮಿ.ಮೀ. ಕಳೆದ ವರ್ಷ ಇದೇ ದಿನ 39.56 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 979.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 876.28 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 130.08 ಮಿ.ಮೀ. ಕಳೆದ ವರ್ಷ ಇದೇ ದಿನ 59.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1447.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1212.55 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 89.72 ಮಿ.ಮೀ. ಕಳೆದ ವರ್ಷ ಇದೇ ದಿನ 50.22 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 854.14 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 900.58 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 98.55 ಮಿ.ಮೀ. ಕಳೆದ ವರ್ಷ ಇದೇ ದಿನ 9.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 635.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 515.71 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 141.6, ನಾಪೋಕ್ಲು 131.1, ಸಂಪಾಜೆ 61.2, ಭಾಗಮಂಡಲ 186.4, ವಿರಾಜಪೇಟೆ ಕಸಬಾ 63.8, ಹುದಿಕೇರಿ 86.2, ಶ್ರೀಮಂಗಲ 150.6, ಪೊನ್ನಂಪೇಟೆ 122.2, ಅಮ್ಮತ್ತಿ 39, ಬಾಳೆಲೆ 76.5, ಸೋಮವಾರಪೇಟೆ ಕಸಬಾ 91.4, ಶನಿವಾರಸಂತೆ 85.6, ಶಾಂತಳ್ಳಿ 207.3, ಕೊಡ್ಲಿಪೇಟೆ 135.8, ಕುಶಾಲನಗರ 28, ಸುಂಟಿಕೊಪ್ಪ 43.2 ಮಿ.ಮೀ.ಮಳೆಯಾಗಿದೆ.