ಸುಂಟಿಕೊಪ್ಪದಲ್ಲಿ ಮರ ಬಿದ್ದು ಮನೆಗೆ ಹಾನಿ

04/08/2020

ಮಡಿಕೇರಿ ಆ.4 : ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.
ಗಾಳಿಯ ರಭಸಕ್ಕೆ ಅನೇಕ ಕಡೆ ಮರಗಳು ಧರೆಗುರುಳಿದ್ದು, ಸುಂಟಿಕೊಪ್ಪ ಶಿವರಾಮ ಬಡಾವಣೆಯ ರಾಸಯ್ಯ ಎಂಬವರ ಮನೆ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆಯು ನಡೆದಿದೆ. ಮನೆಗೆ ಅಪಾರ ನಷ್ಟವಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ‌ತೊಂದರೆಯಾಗಿಲ್ಲ. ಸ್ಥಳಕ್ಕೆ ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸುಮಾರು 80 ಸಾವಿರ ನಷ್ಟ ಸಂಭವಿಸಿದೆ ಎ೦ದು ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.