ಜಿಲ್ಲೆಯಲ್ಲಿ 4 ಹೊಸ ಸೋಂಕು ಪ್ರಕರಣ ಪತ್ತೆ : 212 ಸಕ್ರಿಯ ಪ್ರಕರಣ

05/08/2020

ಮಡಿಕೇರಿ ಆ. 5 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 4 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿಯ ಆಜಾದ್ ನಗರದ 75 ಮತ್ತು 33 ವರ್ಷದ ಪುರುಷ,27 ವರ್ಷದ ಮಹಿಳೆ.
ವಿರಾಜಪೇಟೆಯ ಬೆಕ್ಕೆಸೊಡ್ಲೂರುವಿನ 45 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 564 ಆಗಿದ್ದು, 342 ಮಂದಿ ಗುಣಮುಖರಾಗಿದ್ದಾರೆ. 212 ಸಕ್ರಿಯ ಪ್ರಕರಣಗಳಿದ್ದು, 10 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 144 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.