ಮಡಿಕೇರಿಯಲ್ಲಿ ಹಿಂದೂ ಸಂಘಟನೆಗಳಿಂದ ವಿಶೇಷ ಪೂಜೆ

05/08/2020

ಮಡಿಕೇರಿ ಆ.5 : ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರದ ಭೂಮಿ ಪೂಜನಾ ಸಮಾರಂಭ ಪ್ರಯುಕ್ತ ಇಂದು ನಗರದ ಶ್ರೀ ರಾಮ ಮಂದಿರ ಹಾಗೂ ಕೋದಂಡ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸೀಮಿತ ಸಂಖ್ಯೆಯ ಕಾರ್ಯಕರ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.