ರಾಮಮಂದಿರ ಭೂಮಿ ಪೂಜೆ : ಚೆಟ್ಟಳ್ಳಿಯ ನರೇಂದ್ರ ಮೋದಿ ಭವನದಲ್ಲಿ ವಿಶೇಷ ಪೂಜೆ
05/08/2020

ಮಡಿಕೇರಿ ಆ. 5 : ಚೆಟ್ಟಳ್ಳಿಯ ನರೇಂದ್ರ ಮೋದಿ ಭವನದಲ್ಲಿ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ ಸಂಘದ ಪರವಾಗಿ ಅಯೋಧ್ಯೆಯ ರಾಮಮಂದಿರದ ಶಿಲಾನ್ಯಾಸ ಹಾಗೂ ಇತರ ಪೂಜಾಕ್ರಮ ಸುಸೂತ್ರವಾಗಿ ನೇರವೇರಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಚೆಟ್ಟಳ್ಳಿ ಸಹಕಾರ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಹಾಜರಿದ್ಧರು.

