ಹಾರಂಗಿಯಿಂದ 10,689 ಕ್ಯುಸೆಕ್ ನೀರು ಬಿಡುಗಡೆ : ಮುನ್ನೆಚ್ಚರಿಕೆ ವಹಿಸಲು ಮನವಿ
05/08/2020

ಮಡಿಕೇರಿ ಆ. 5 : ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯದಿಂದ 10,689 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಈ ಪ್ರಮಾಣವು ಯಾವುದೇ ಸಂದರ್ಭದಲ್ಲೂ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ/ ಪ್ರದೇಶಗಳಿಗೆ ತೆರಳುವಂತೆ ಕುಶಾಲನಗರ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಾಜೇಗೌಡ ಅವರು ಕೋರಿದ್ದಾರೆ.
