ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

05/08/2020

ಮಡಿಕೇರಿ ಆ. 5 : ಪ್ರಸಕ್ತ(2020-21 ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 2019 ರಲ್ಲಿ (01-01-2019 ರಿಂದ 31-12-2019) ಅಂತರ್‍ರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://karunadu.karnataka.gov.in/dyes ಮೂಲಕ ಆನ್‍ಲೈನ್‍ನಲ್ಲಿ ಆಗಸ್ಟ್, 30 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.