Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:13 PM Sunday 17-October 2021

ಕೊಡಗು ಮಹಾಮಳೆಯಿಂದ ಎಲ್ಲೆಲ್ಲಿ ಏನೇನಾಗಿದೆ : ಇಲ್ಲಿದೆ ಮಾಹಿತಿ

06/08/2020

ಮಡಿಕೇರಿ ಆ.6 : ಶ್ರೀಮಂಗಲ ಹೋಬಳಿ ಹರಿಹರ ಗ್ರಾಮದ ನವೀನ್ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು, ಮೇಲ್ಛಾವಣಿಗೆ ಹಾಕಲಾದ ಶೀಟ್‍ಗಳು ಹಾನಿಯಾಗಿದೆ. ಚೆಸ್ಕಾಂ ಇಲಾಖಾ ಪರಿಹಾರ ತಂಡ ಭೇಟಿ ನೀಡಿ ಸೂಕ್ತ ಕ್ರಮ ವಹಿಸಲಾಗಿದೆ. ಬಿಟ್ಟಂಗಾಲ-ಬಿ.ಶೆಟ್ಟಿಗೇರಿ ರಸ್ತೆಯಲ್ಲಿ ಮರ ಬಿದ್ದಿದ್ದು, ತೆರವುಗೊಳಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕು ಮಕ್ಕಂದೂರು (ಉದಯಗಿರಿ) ಬಳಿ ಮರ ಬಿದ್ದು, ಮಡಿಕೇರಿ-ಸೋಮವಾರಪೇಟೆ ರಸ್ತೆ ಬಂದ್ ಆಗಿದ್ದು, ತೆರವುಗೊಳಿಸಲಾಗಿದೆ. ಕ್ಲಬ್ ಮಹೀಂದ್ರ ರಸ್ತೆಯಲ್ಲಿ ಮರ ಬಿದ್ದಿದ್ದು, ತೆರವುಗೊಳಿಸಲಾಗಿದೆ. ಮಡಿಕೇರಿಯ ಮಂಗಳಾದೇವಿ ನಗರದಲ್ಲಿ ತಡರಾತ್ರಿ ಬರೆ ಜರಿದಿದ್ದು, ಪರಿಹಾರ ತಂಡ ಧಾವಿಸಿ ಪರಿಶೀಲನೆ ನಡೆಸಲಾಗಿದೆ. ಯಾವುದೇ ಹಾನಿ ಸಂಭವಿಸಿಲ್ಲ. ಈ ಭಾಗದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪ್ರಯತ್ನಿಸಲಾಗಿ, ನಿವಾಸಿಗಳು ಒಪ್ಪದ್ದರಿಂದ, ರಾತ್ರಿ ಬೀಟ್ ಪೆÇಲೀಸರಿಗೆ ಆಗಾಗ್ಗೆ ತೆರಳಿ ಪರಿಸ್ಥಿತಿ ಅವಲೋಕಿಸಲು ತಿಳಿಸಲಾಗಿದೆ.
ಕುಶಾಲನಗರದ ಕುವೆಂಪು ಬಡಾವಣೆಯಲ್ಲಿ ಪ್ರವಾಹ ಉಂಟಾಗುವ ಸಂಭವವಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳಲು ಪಂಚಾಯತಿ ವತಿಯಿಂದ ಮಾಹಿತಿ ನೀಡಲಾಗಿದೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಸದರಿ ಸ್ಥಳಕ್ಕೆ ರಿವರ್ ರಾಫ್ಟಿಂಗ್ ತಂಡವನ್ನು ನಿಯೋಜಿಸಲಾಗಿದೆ.
ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪದಲ್ಲಿ ಸಹ ಭಾರೀ ಮಳೆಯಿಂದ ಪ್ರವಾಹ ಉಂಟಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಿವರ್ ರಾಫ್ಟಿಂಗ್ ತಂಡ ಮತ್ತು ಅಗ್ನಿಶಾಮಕ ದಳವನ್ನು ನಿಯೋಜಿಸಲಾಗಿದೆ. ಮಡಿಕೇರಿ ನಗರದ ಮೈತ್ರಿಹಾಲ್ ನ ಶೀಟ್ ಗಳು ಹಾರಿ ಹೋಗಿದ್ದು, ರಿಪೇರಿಗೆ ಕ್ರಮ ವಹಿಸಲಾಗಿದೆ.
ಪ್ರಕೃತಿ ವಿಕೋಪದ ಮಾಹಿತಿ ಬಂದೊಡನೆ ಜಿಲ್ಲಾಡಳಿತದ ಪರಿಹಾರ ತಂಡವು ಕಾರ್ಯೋನ್ಮುಖವಾಗುತ್ತಿದ್ದು, ಸ್ಥಳೀಯ ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ, ಸ್ಥಳೀಯ ಜನರು ಮತ್ತು ಸ್ವಯಂ ಸೇವಕರ ನೆರವಿನಿಂದ ಪರಿಹಾರ ಕಾರ್ಯ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುವ ಅನಾನುಕೂಲಗಳನ್ನು ಎದುರಿಸಲು ಜಿಲ್ಲಾಡಳಿತವು ಸಜ್ಜಾಗಿದ್ದು, ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಆದಾಗ್ಯೂ ಗುಡ್ಡಗಾಡು ಮತ್ತು ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.
ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಸಂ:221077 ಮತ್ತು ವಾಟ್ಸಪ್ ಸಂ: 8550001077 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೋರಿದ್ದಾರೆ.