ಬೇತ್ರಿ ಸೇತುವೆ ಮೇಲಿನ ಸಂಚಾರ ನಿರ್ಬಂಧ : ಬದಲಿ ರಸ್ತೆ ವ್ಯವಸ್ಥೆ

06/08/2020

ಮಡಿಕೇರಿ ಆ. 6 : ಮಡಿಕೇರಿ – ವಿರಾಜಪೇಟೆ ರಸ್ತೆಯ ಬೇತ್ರಿಯಲ್ಲಿ ಕಾವೇರಿ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ಸುರಕ್ಷತೆಯ ದೃಷ್ಠಿಯಿಂದ ಬೇತ್ರಿ ಸೇತುವೆ ಮೇಲಿನ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಸಾರ್ವಜನಿಕರು ಮೂರ್ನಾಡು – ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ, ಮಡಿಕೇರಿ – ಮರಗೋಡು-ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ, ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ-ಸಿದ್ದಾಪುರ-ಅಮ್ಮತ್ತಿ-ವಿರಾಜಪೇಟೆ,ಸುಂಟಿಕೊಪ್ಪ- ಚೆಟ್ಟಳ್ಳಿ-ನೆಲ್ಲಿಹುದಿಕೇರಿ-ಸಿದ್ದಾಪುರ-ಅಮ್ಮತ್ತಿ-ವಿರಾಜಪೇಟೆ ಈ ಬದಲಿ ಮಾರ್ಗಗಳನ್ನು ಬಳಸಬಹುದಾಗಿದೆ.