ಹೊದ್ದೂರು ಗ್ರಾಮದ ಎರಡು ಕುಟುಂಬ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ

06/08/2020

ಮಡಿಕೇರಿ ಆ. 6 : ಜಿಲ್ಲೆಯಲ್ಲಿ ಧಾರಾಕಾರವಾಗಿ ಗಾಳಿ ಸಹಿತ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಡೆ ಮರಗಳು, ವಿದ್ಯುತ್ ಕಂಬಗಳು ಬಿದ್ದಿದ್ದು, ಗುಡ್ಡ ಕುಸಿತವೂ ಉಂಟಾಗಿದೆ. ಆದ್ದರಿಂದ ಪ್ರವಾಹ ಪೀಡಿತ ಪ್ರದೇಶ ಹೊದ್ದೂರು ಗ್ರಾಮದ ಎರಡು ಕುಟುಂಬದ 7 ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.