ಪಡಿಯಾನಿ ಗ್ರಾಮದಲ್ಲಿ ಮರ ಬಿದ್ದು ಮನೆಗೆ ಹಾನಿ

06/08/2020

ಮಡಿಕೇರಿ ಆ.6 : ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಬಿರುಗಾಳಿ, ಮಳೆಗೆ ಭಾರೀ ಗಾತ್ರದ ಮರ ಬಿದ್ದು ಎಮ್ಮೆಮಾಡು ಸಮೀಪದ ಪಡಿಯಾನಿ ಗ್ರಾಮದ ಅರೆಯಂಡ ಅಬ್ದುಲ್ ರಹಿಮಾನ್ ಅವರ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯವರೆಲ್ಲ ಒಳಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಚಿಕ್ಕಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿದ್ದರು.