ಜಿಲ್ಲೆಯ ಮೂರು ಭಾಗಗಳಲ್ಲಿ ಪರಿಹಾರ ಕೇಂದ್ರ

06/08/2020

ಮಡಿಕೇರಿ ಆ. 6 : ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 3 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕೆ.ವಿ.ಜಿ ಕಾಲೇಜು ಭಾಗಮಂಡಲ – ಒಟ್ಟು 1 ಕುಟುಂಬ 3 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು ಪರಿಹಾರ ಕೇಂದ್ರದಲ್ಲಿದ್ದಾರೆ.

ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ.