ಒಂಟಿ ಮಹಿಳೆ ಹತ್ಯೆ ಆರೋಪಿ ಬಂಧನ : ಅಪರಾದ ಪತ್ತೆದಳದ ಪೊಲೀಸರ ಯಶಸ್ವಿ ಕಾರ್ಯಾಚರಣೆ

07/08/2020

ಮಡಿಕೇರಿ ಆ. 7 : ಮಡಿಕೇರಿ ತಾಲ್ಲೂಕಿನ ಮರಗೋಡು ವ್ಯಾಪ್ತಿಯ ಕಟ್ಟೆಮಾಡು ಪರಂಬು ಪೈಸಾರಿಯಲ್ಲಿ ನೆಲೆಸಿದ್ದ ಒಂಟಿ ವೃದ್ಧೆಯನ್ನು ಕೊಲೆಮಾಡಿ ಚಿನ್ನಾಭರಣಗಳನ್ನು ದೋಚಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಅಧಿಕಾರಿ ಹಾಗೂ ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ.
ಮರಗೋಡು ವ್ಯಾಪ್ತಿಯ ಕಟ್ಟೆಮಾಡಿನ ಪರಂಬು ಪೈಸಾರಿಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣವನ್ನು ದೋಚಿರುವ ಪ್ರಕರಣದ ಬಗ್ಗೆ ಜನವಯದಲ್ಲಿ ಆತಂಕ ವ್ಯಕ್ತವಾದುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಪತ್ತೆ ಹಚ್ಚುವ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿತ್ತು.
ಪ್ರಕರಣದ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾಹಿತಿಯನ್ನು ಕಲೆಹಾಕಿದಾಗ ಕಟ್ಟೆಮಾಡಿನ ಪರಂಬು ಪೈಸಾರಿಯಲ್ಲಿ ವಾಸವಿದ್ದ ಜಕ್ರಿಯಾ (42) ಎಂಬ ವ್ಯಕ್ತಿ ವೃದ್ದೆಯನ್ನು ಕೊಲೆಮಾಡಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆ ಆರೋಪಿಯನ್ನು ಪತ್ತೆಯಚ್ಚಿ ವಶಕ್ಕೆ ಪಡೆಯಲಾಗಿದೆ.
ಆರೋಪಿಯಿಂದ ಕೊಲೆಯಾಗಿದ್ದ ವೃದ್ಧೆ ಮೈಮೇಲಿದ್ದ ಅಂದಾಜು 1 ಲಕ್ಷದ 5 ಸಾವಿರ ಮೌಲ್ಯದ ಚಿನ್ನದ ಸರ ಹಾಗೂ ಒಂದು ಜೊತೆ ಚಿನ್ನದ ಕಿವಿಯೋಲೆ ಹಾಗೂ 1 ಸಾವಿರ ಮೌಲ್ಯದ ಮೊಬೈಲ್ ಫೋನ್ ವಶಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರ, ಮಡಿಕೇರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ನಿರೀಕ್ಷಕ ಎನ್. ಕುಮಾರ್ ಆರಾದ್ಯ, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಸಿ.ಎನ್. ದಿವಾಕರ್, ಡಿಸಿಐಬಿ ಹೆಚ್ಚುವರಿ ಕರ್ತವ್ಯದಲ್ಲಿರುವ ಮಡಿಕೇರಿ ಗ್ರಾಮಾಂತರ ಠಾಣೆಯ ಪಿಎಸ್‍ಐ ಹೆಚ್.ವಿ. ಚಂದ್ರಶೇಖರ್, ಪ್ರೋಬೇಷನರಿ ಪಿಎಸ್‍ಐ ಶ್ರವಣ್, ಡಿಸಿಐಬಿಯ ಎಎಸ್‍ಐ ಯ ಎಎಸ್‍ಐ ಕೆ.ವೈ. ಹಮೀದ್, ಸಿಬ್ಬಂದಿಗಳಾದ ಕೆ.ಎಸ್. ವಸಂತ, ಎಂ.ಎನ್. ನಿರಂಜನ್, ಬಿ.ಜೆ. ಶರತ್ ರೈ, ಹಾಗೂ ಚಾಲಕರಾದ ಕೆ.ಎಸ್. ಶಶಿಕುಮಾರ್, ಪ್ರವೀಣ್ ಮತ್ತು ಸಿಡಿಆರ್ ಸೆಲ್‍ನ ಗಿರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.