ಬೊಟ್ಲಪ್ಪ ಗ್ರಾಮದಲ್ಲಿ ಭೂಕುಸಿತ : ಸ್ಥಳೀಯ ನಿವಾಸಿಗಳ ಸ್ಥಳಾಂತರ

07/08/2020

ಮಡಿಕೇರಿ ಆ. 7 : ಕೊಡಗು ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಆರ್ಭಟದ ಹಿನ್ನೆಲೆಯಲ್ಲಿ ಗುರುವಾರ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದಿತ್ತು. ಇದೀಗ ಮಡಿಕೇರಿ ತಾಲೂಕಿನ ಬೊಟ್ಲಪ್ಪ ಗ್ರಾಮದಲ್ಲಿ ಭೂಕುಸಿತವಾಗಿದ್ದು,  ಮುನ್ನೆಚ್ಚರಿಕೆಯಾಗಿ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅಪಾಯದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮಾಡಲಾಗುತ್ತಿದೆ. ಆದರೆ ಸಂಪರ್ಕ ಕಡಿತಗೊಂಡ ಪರಿಣಾಮ ಕಾರ್ಯಾಚರಣೆಗೆ ಅಡ್ಡಿಯಾಗಿದೆ.