ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ : ಕೊಡಗು ಜಿಲ್ಲಾಡಳಿತ ಕಚೇರಿ ಸ್ಥಳಾಂತರ

07/08/2020

ಮಡಿಕೇರಿ ಆ. 7 : ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಕೊಡಗು ಜಿಲ್ಲಾಡಳಿತ ಭವನದ ಕೆಳಭಾಗದಲ್ಲಿ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತಗೊಂಡಿದ್ದು, ಅಪಾಯದ ಆತಂಕ ಎದುರಾಗಿದೆ.

ತಜ್ಞರ ಸೂಚನೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತದ ಪ್ರಮುಖ ಕಚೇರಿ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಕಚೇರಿಯನ್ನು ಸಮೀಪದ ನಗರಸಭÉಯ ಕಾರ್ಯಾಲಯಕ್ಕೆ ಸ್ಥಳಾಂತರಿಸಲಾಗಿದೆ.