ಕೊಡಗಿನಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ : ಮೃತರ ಸಂಖ್ಯೆ 11ಕ್ಕೆ ಏರಿಕೆ

07/08/2020

ಮಡಿಕೇರಿ ಆ. 7 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಕೋವಿಡ್ ಸಂಬಂಧದ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಹೋಬಳಿ, ತಾವರೆಕೆರೆ ನಿವಾಸಿ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಅಸ್ತಮಾದಿಂದ ಕಾಯಿಲೆಗಳಿದ್ದ 58 ವರ್ಷದ ಮಹಿಳೆಯೊಬ್ಬರು 04 ದಿನಗಳಿಂದ ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರು ದಿನಾಂಕ: 05-08-2020 ರಂದು ಕುಶಾಲನಗರದ ಖಾಸಗಿ ಆಸ್ಪತ್ರೆಗೆ ತೆರಳಿರುತ್ತಾರೆ.

ಖಾಸಗಿ ಆಸ್ಪತ್ರೆಯಲ್ಲಿ ಗಂಟಲು/ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಈ ದಿನ ವರದಿ ಬಂದಿದ್ದು, ಇದೇ ದಿನ ಅವರು ಸಾವನ್ನಪ್ಪಿರುತ್ತಾರೆ.

ಆದ್ದರಿಂದ ಇದನ್ನು ಕೋವಿಡ್ ಸಂಬಂಧದ ಸಾವು ಎಂದು ಪರಿಗಣಿಸಿ, ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಮೃತ ದೇಹದ ಅಂತ್ಯಕ್ರಿಯೆಯನ್ನು ನಡೆಸಲಾಗುವುದು.